ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 48,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 1005 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,99,459ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 5,23,257 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 96.92%ಕ್ಕೆ ಏರಿಕೆಯಾಗಿದೆ. 2,94,88,918 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 61,588 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.