ಬೆಂಗಳೂರು: ಮಗ ಯತಿರಾಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ನಟ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ ಹೋಗಿ ಬರುತ್ತೇನೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಹೊರ ಹೋಗಿದ್ದ, ಈ ವೇಳೆ ಕಾರು ಅಪಘಾತಕ್ಕೀಡಾಗಿದೆ. ಒಂದು ಸಣ್ಣ ಗಾಯವೂ ಆಗದಂತೆ ಮಗನನ್ನು ಪವಾಡದ ರೀತಿ ರಾಯರು ಕಾಪಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರು ಟು ಚಿಕ್ಕಬಳ್ಳಾಪುರ ಮಾರ್ಗವಾಗಿ ಹೋಗಿ ಬರುತ್ತಾನೆ. ಇಂದು ಕೂಡ ಹೋಗಿ ಬರುವಾಗ ರಸ್ತೆಗೆ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಆಗಿಲ್ಲ ಎಂದು ಹೇಳಿದ್ದಾರೆ.
ರಾಯರು ನನ್ನಜೊತೆ ಸದಾ ಇರುತ್ತಾರೆ ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೆ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರೇ…..ಎಂದು ಟ್ವೀಟ್ ಮಾಡಿದ್ದಾರೆ.