ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 46,617 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,04,58,251ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 853 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,00,312ಕ್ಕೆ ಏರಿಕೆಯಾಗಿದೆ.
ಕೋವಿಡ್ ವಿರುದ್ದ ಮಧುಮೇಹದ ಮದ್ದು ಪರಿಣಾಮಕಾರಿ….? ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ
ಇನ್ನು ದೇಶದಲ್ಲಿ 5,09,637 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,95,48,302 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 59,384 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಾರ್ಮಿಕರು, ಕುಟುಂಬ ಸದಸ್ಯರಿಗೆ ಭರ್ಜರಿ ಕೊಡುಗೆ: ಸಹಾಯಧನ ಭಾರಿ ಹೆಚ್ಚಳ
ನಿನ್ನೆ 18,80,026 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 41,42,51,520 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 34,00,76,232 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.