ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತೀರತ್ ಸಿಂಗ್ ರಾವತ್ ದಿಢೀರ್ ಬೆಳವಣಿಗೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಮಾರ್ಚ್ 10 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಅವರು ಆರು ತಿಂಗಳು ಕಳೆಯುವುದರೊಳಗೆ ಶಾಸಕರಾಗಿ ಆಯ್ಕೆಯಾಗಿಬೇಕಿತ್ತು. ಆದರೆ, ಆ ಸಾಧ್ಯತೆ ಕಡಿಮೆ ಇದ್ದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಡೆಹ್ರಾಡೂನ್ ನಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ. ವೀಕ್ಷಕರಾಗಿ ಕೇಂದ್ರ ಸಚಿವ ನರೇಂದ್ರ ಸಿಂಗ್ ಅವರನ್ನು ವೀಕ್ಷಕರಾಗಿ ನಿಯೋಜಿಸಲಾಗಿದೆ.