alex Certify GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 44,111 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,02,362ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 738 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,01,050ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,95,533 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,96,05,779 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 57,477 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 34,46,11,291 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...