ಬೆಂಗಳೂರು: ಕೇಂದ್ರ ಸಂಪುಟ ಪುನಾರಚನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ತಮ್ಮ ವಿರುದ್ಧ ಅಪಪ್ರಾಚಾರ ಮಾಡುವಂತಹ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಸಚಿವ ಡಿ.ವಿ.ಸದಾನಂದಗೌಡ ತಡೆಯಾಜ್ಞೆ ತಂದಿದ್ದು, ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಕಳ್ಳನ ಮನಸು ಹುಳ್ಳುಳ್ಳಗೆ ಎಂಬಂತೆ ಸದಾನಂದಗೌಡರು, ಸಿಡಿ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದಾರೆ ಎಂದು ಕುಟುಕಿದೆ.
ತಡೆಯಾಜ್ಞೆ ತಂದ ಬಿಜೆಪಿಗರಲ್ಲಿ ಇವರು ಏಳನೆಯವರು. ಬಿಜೆಪಿಯವರಿಗೇ ಏಕೆ ಈ ಪರಿ ಸಿಡಿ ಭಯ ಕಾಡುವುದು ಎಂಬದೇ ಯಕ್ಷಪ್ರಶ್ನೆ. ತಡೆಯಾಜ್ಞೆ ತರುವ ಮೂಲಕ ತಮ್ಮದೂ ಸಿಡಿ ಇದೆ ಎಂದು ಗೌಡರು ಸ್ವಯಂ ಒಪ್ಪಿಕೊಂಡಂತಾಗಿದೆ ಎಂದು ತಿರುಗೇಟು ನೀಡಿದೆ.
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಅಪ್ಪಳಿಸಿದ ಸಿಡಿಲು…! ಬೆಚ್ಚಿಬೀಳಿಸುವಂತಿದೆ ವಿಡಿಯೋ
ತಮ್ಮವರಿಂದಲೇ ಬ್ಲ್ಯಾಕ್ ಮೇಲ್ ಜನತಾ ಪಾರ್ಟಿ ಎಂದು ಕರೆಸಿಕೊಂಡ ಬಿಜೆಪಿಯಲ್ಲಿ ಬ್ಲಾಕ್‌ಮೇಲ್ ಭರ್ಜರಿಯಾಗಿ ನಡೆಯುತ್ತಿರುವಂತಿದೆ. ಕಂಡವರ ಬೆಡ್ ರೂಮಲ್ಲಿ ಕ್ಯಾಮೆರಾ ಇಡುವ ಚಾಳಿ ಹೊಂದಿರುವ ರಾಜ್ಯ ಬಿಜೆಪಿ ನಾಯಕರು ಡಿವಿಎಸ್ ಅವರನ್ನೂ ಬ್ಲಾಕ್‌ಮೇಲ್ ಮಾಡುತ್ತಿರುವಂತಿದೆ. ಒಟ್ಟಿನಲ್ಲಿ ಬಿಜೆಪಿಯಲ್ಲಿ ಸ್ವಚ್ಛ ಚಾರಿತ್ರ್ಯ ಹೊಂದಿದವರು ಒಬ್ಬರೂ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಲೇವಡಿ ಮಾಡಿದೆ.