ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಜೆಂಡಾ ಇಲ್ಲ. ನಮ್ಮ ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯಕರ ಮುಂದೆ ಅಂತಹ ಯಾವುದೇ ಅಜೆಂಡಾ ಇಲ್ಲವೆಂದು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಮುಂದಿನ ಎರಡು ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದ್ದಾರೆ.