ಕೊಪ್ಪಳ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಇನ್ನೂ ಎರಡು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ಮುಂದಿನ ಚುನಾವಣೆ ಕೂಡ ಅವರ ನೇತೃತ್ವದಲ್ಲೇ ನಡೆಯಲಿದೆ. ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಎಂದು ಹೇಳಿದರು.
ನಮ್ಮದೇ ಸರ್ಕಾರವಿದ್ರೂ ಪ್ರಯೋಜನವಿಲ್ಲ, ಚಪ್ಪಡಿ ಕಲ್ಲಿನ ಸ್ಥಿತಿ ನಮ್ಮದು: ಸಿ.ಪಿ. ಯೋಗೇಶ್ವರ್
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕಾರಜೋಳ, ಇಡೀ ದೇಶದಲ್ಲಿ ಕಾಂಗ್ರೆಸ್ ಅನಾಥವಾಗಿದೆ. ಅದು ಒಂದು ಪಕ್ಷವೇ ಅಲ್ಲ. ಸ್ವಾತಂತ್ರ್ಯ ಹೋರಾಟಕ್ಕಾಗಿ ಕಟ್ಟಿಕೊಂಡ ಸಂಘಟನೆ ಅಷ್ಟೆ ಎಂದು ಹೇಳಿದ್ದಾರೆ.