ಮಡಿಕೇರಿ: ಪ್ರಸಕ್ತ(2021-22) ಸಾಲಿನಲ್ಲಿ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಉತ್ಪಾದನ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಎಸ್.ಸಿ./ಎಸ್.ಟಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಸೈನಿಕ, ಅಂಗವಿಕಲರು, ಮಹಿಳೆಯರು, ಸಾಮಾನ್ಯ ವರ್ಗ, ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವ ಉದ್ಯೋಗ ಮಾಡಿಕೊಳ್ಳುವವರಿಗೆ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 25 ಲಕ್ಷ ರೂ.ವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನವನ್ನು ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ www.kvic.org.in (pmegp online application) ಅರ್ಜಿ ಸಲ್ಲಿಸುವಾಗ (ಏಜೆನ್ಸಿ ಕೋಡ್ ಕೆವಿಐಬಿ) ಎಂದು ಅರ್ಜಿಯಲ್ಲಿ ಅಳವಡಿಸಿ ಅದರ ಪ್ರತಿಯೊಂದಿಗೆ 2 ಸೆಟ್‍ನಲ್ಲಿ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ಎಚ್.ಆರ್.ರಾಮಕೃಷ್ಣ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು ಮತ್ತು ದೂ.ಸಂ.08272-225946, 9480825630 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಹೆಚ್.ಆರ್. ರಾಮಕೃಷ್ಣ ಅವರು ತಿಳಿಸಿದ್ದಾರೆ.