alex Certify GOOD NEWS: ದಾಖಲೆ ಪ್ರಮಾಣದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದಾಖಲೆ ಪ್ರಮಾಣದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 39,796 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 723 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ.

ಕೋವಿಡ್ ಕಾಲದ ಆರ್ಥಿಕ ಸಂಕಷ್ಟ ಎದುರಿಸಲು ಇಲ್ಲಿವೆ ಟಿಪ್ಸ್‌

ಇನ್ನು ದೇಶದಲ್ಲಿ 4,82,071 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,00,430ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,352 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 15,22,504 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು ದೇಶದಲ್ಲಿ ಈವರೆಗೆ 41,97,77,457 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 35,28,92,046 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...