ಬೆಂಗಳೂರು: ದ್ವಿತೀಯ ಪಿಯುಸಿ ರಿಪೀಟರ್ಸ್ ಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ರಿಪಿಟರ್ಸ್ ಗಳನ್ನು ಕೂಡ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಈ ಬಾರಿ ದ್ವಿತಿಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವುದಾಗಿ ಘೋಷಿಸಿದ್ದ ಸರ್ಕಾರ ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.
ವಿಚಾರಣೆ ನಡೆಸಿದ್ದ ನ್ಯಾಯಾಲಯ, ರಾಜ್ಯ ಸರ್ಕಾರ ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆಗಳನ್ನು ಇಟ್ಟು ತಾರತಮ್ಯವೆಸಗುತ್ತಿರುವುದಾದರೂ ಯಾಕೆ ? ಪಾಸ್ ಮಾಡುವುದಿದ್ದರೆ ಎಲ್ಲರನ್ನೂ ಪಾಸ್ ಮಾಡಬೇಕು. ಈ ಬಗ್ಗೆ ನ್ಯಾಯಾಲಯಕ್ಕೆ ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿತ್ತು.
BIG NEWS: ಸಚಿವ ಸಿ.ಪಿ. ಯೋಗೇಶ್ವರ್ ಗೆ ಬಿ.ಸಿ. ಪಾಟೀಲ್ ಟಾಂಗ್; ಡಿಕೆಶಿ ಕನಸೂ ನನಸಾಗಲ್ಲ ಎಂದು ವಾಗ್ದಾಳಿ
ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ರಿಪೀಟರ್ಸ್ ಗಳಿಗೂ ಪಾಸ್ ಮಾಡುವುದಾಗಿ ಹೇಳಿದ್ದು, ಶೇ.35ರಷ್ಟು ಅಂಕಗಳನ್ನು ನೀಡಲು ನಿರ್ಧರಿಸಿರುವುದಾಗಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ.