ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಸಾರ ಸರ್ಕಾರವಿದೆ. ವಿಪಕ್ಷಗಳೂ ಸಿಎಂ ಬಿ ಎಸ್ ವೈ ಜೊತೆ ಶಾಮೀಲಾಗಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಂಥ ಭ್ರಷ್ಟ ಸರ್ಕಾರದಲ್ಲಿ ಇವರೇಕೇ ಮುಂದುವರೆದಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಹಳ ದಿನದಿಂದ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ವಿಪಕ್ಷದ ವಿರುದ್ಧವೂ ಆರೋಪ ಮಾಡುತ್ತಿದ್ದಾರೆ. ಭ್ರಷ್ಟ ಸರ್ಕಾರದಲ್ಲಿ ಇವರೇಕೆ ಮುಂದುವರೆದಿದ್ದಾರೆ? ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಿತ್ತು. ನಮ್ಮ ಬಗ್ಗೆ ಮಾತನಾಡುವ ಅಧಿಕಾರ ಯತ್ನಾಳ್ ಗಿಲ್ಲ ಎಂದು ಗುಡುಗಿದರು.
ಸರ್ಕಾರ ಹಾಗೂ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರೂ ಬಿಜೆಪಿ ಹೈಕಮಾಂಡ್ ಯತ್ನಾಳ್ ವಿರುದ್ಧ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ? ಇಷ್ಟಕ್ಕೂ ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದರೂ ಎಲ್ಲರೂ ಸುಮ್ಮನಿರುವುದಾದರೂ ಯಾಕೆ? ಬಿಜೆಪಿ ಹೈಕಮಾಂಡ್ ಸೂಚನೆಯಿಂದಲೇ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.