ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರಿ ಮಳೆ ಸಾಧ್ಯತೆ ಹಿನ್ನಲೆಯಲ್ಲಿ 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಜುಲೈ 6 ರಿಂದ 8 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಆರ್ಭಟದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಜುಲೈ 10 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಜುಲೈ 7 ರ ವರೆಗೆ ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು, ಹಾಸನ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಧಾರವಾಡ, ಯಾದಗಿರಿ, ಕಲಬುರ್ಗಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.