ಆಸ್ಸಾಂನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಸಾಂ ಸರ್ಕಾರವು 7 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಆದೇಶ ಜಾರಿಗೆ ತಂದಿದೆ. ಈ ಸಂಪೂರ್ಣ ಲಾಕ್ಡೌನ್ ಆದೇಶವು ನಾಳೆಯಿಂದ ಜಾರಿಗೆ ಬರಲಿದೆ. ಮುಂದಿನ ಆದೇಶದವರೆಗೂ ಲಾಕ್ಡೌನ್ ಈ 7 ಜಿಲ್ಲೆಗಳಲ್ಲಿ ಮುಂದುವರಿಯಲಿದೆ.
ಆಸ್ಸಾಂ ಸರ್ಕಾರದ ಆದೇಶದಂತೆ ಗೋಲ್ಪರ, ಗೋಲಾಘಾಟ್, ಲಖೀಂಪುರ, ಸೋನಿತ್ಪುರ, ಬಿಸ್ವನಾಥ್ ಹಾಗೂ ಮೋರಿಗಾಂವ್ನಲ್ಲಿ ಲಾಕ್ಡೌನ್ ಆದೇಶ ಜಾರಿಗೆ ಬರಲಿದೆ.
ಲಾಕ್ಡೌನ್ ಆದೇಶದ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಸಮಯದಲ್ಲಿ ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು, ಅಂಗಡಿಗಳು ಬಂದ್ ಇರಲಿವೆ. ಇದರ ಜೊತೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ವಾಹನಗಳ ಸಂಚಾರವೂ ಇರೋದಿಲ್ಲ. ಈ ಮೂಲಕ ಅಂತರ್ಜಿಲ್ಲಾ ಓಡಾಟಕ್ಕೂ ನಿರ್ಬಂಧ ಹೇರಲಾಗಿದೆ.
ಈ ಏಳು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮಿತಿಮೀರುತ್ತಿದೆ. ಹೀಗಾಗಿ ನಾಳೆಯಿಂದ ಈ ಏಳು ಜಿಲ್ಲೆಗಳಲ್ಲಿ 24 ಗಂಟೆಗಳ ಕಾಲ ಕರ್ಫ್ಯೂ ಆದೇಶ ಜಾರಿಯಲ್ಲಿ ಇರಲಿದೆ.
ಮಧ್ಯಮ ಪ್ರಮಾಣದಲ್ಲಿ ಕೊರೊನಾ ಸೋಂಕನ್ನ ಹೊಂದಿರುವ ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಆದೇಶ ಜಾರಿಯಲ್ಲಿ ಇರಲಿದೆ. ಕೊರೊನಾ ಸೋಂಕಿನ ಪ್ರಮಾಣದಲ್ಲಿ ಸುಧಾರಣೆ ಕಾಣುತ್ತಿರುವ ಜಿಲ್ಲೆಗಳಲ್ಲಿ ಸಂಜೆ 5 ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಆದೇಶ ಜಾರಿಯಲ್ಲಿ ಇರಲಿದೆ.