ಮೈಸೂರು: ಸಹಕಾರ ಸಂಘಗಳಲ್ಲಿ ರೈತರು ಪಡೆದುಕೊಂಡ ಕೃಷಿ ಸಾಲ ಮನ್ನಾ ಮಾಡುವ ಕುರಿತಂತೆ ಚಿಂತನೆ ನಡೆದಿದೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಈ ಬಗ್ಗೆ ಮಾತನಾಡಿ, ಕೊರೋನಾ ಸೋಂಕಿನಿಂದ ಮೃತಪಟ್ಟ ಸಹಕಾರ ಸಂಘಗಳ ಸದಸ್ಯರು ಪಡೆದುಕೊಂಡ ಕೃಷಿ ಸಾಲವನ್ನು ಮನ್ನಾ ಮಾಡುವ ಕುರಿತಾಗಿ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.
ಈ ಕುರಿತಾಗಿ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಕೊರೋನಾದಿಂದಾಗಿ ಅನೇಕ ರೈತರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳು ಸಂಕಷ್ಟದಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾದಿಂದ ಮೃತಪಟ್ಟ ಸಹಕಾರ ಸಂಘಗಳ ಸದಸ್ಯರು ಪಡೆದ ಕೃಷಿ ಸಾಲ ಮನ್ನಾ ಮಾಡುವ ಕುರಿತಾಗಿ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.