ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಇಂದು ಸಂಜೆ 5:30 ರಿಂದ 6 ಗಂಟೆಗೆ ನಿಗದಿಯಾಗಿದ್ದು, ದಲಿತರು, ಯುವಕರು ಸೇರಿದಂತೆ ಹಲವು ಹೊಸ ಮುಖಗಳಿಗೆ ಆದ್ಯತೆ ಸಿಗಲಿದೆ.
ಬಿಜೆಪಿ ಮತ್ತು ಎನ್.ಡಿ.ಎ. ಮಿತ್ರ ಪಕ್ಷಗಳ ಸಂಸದರಿಗೆ ಸಚಿವ ಸ್ಥಾನ ಸಿಗಲಿದೆ. ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಆದ್ಯತೆ ನೀಡಲಾಗುವುದು.
ರಾಜ್ಯದಿಂದ ಉಮೇಶ್ ಜಾಧವ್, ನಾರಾಯಣಸ್ವಾಮಿ, ರಮೇಶ್ ಜಿಗಜಿಣಗಿ, ಪಿ.ಸಿ. ಗದ್ದಿಗೌಡರ್, ಶಿವಕುಮಾರ ಉದಾಸಿ, ಭಗವಂತ ಖೂಬಾ, ಬಿ.ವೈ. ರಾಘವೇಂದ್ರ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿವೆ.
ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈ ಬಿಟ್ಟರೆ ಅವರ ಸ್ಥಾನಕ್ಕೆ ರಾಜ್ಯದಿಂದ ಶೋಭಾ ಕರಂದ್ಲಾಜೆ ಅಥವಾ ಪ್ರತಾಪಸಿಂಹ ಅವರಿಗೆ ಅವಕಾಶ ಸಿಗಬಹುದು ಎನ್ನಲಾಗಿದೆ.