ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಯಾವೆಲ್ಲ ಸಂಸದರಿಗೆ ಪ್ರಧಾನಿ ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ ಮಾತನಾಡಿರುವ ಗಣಿ ಸಚಿವ ಮುರುಗೇಶ್ ನಿರಾಣಿ, ರಾಜ್ಯದ 2-3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯಿತರಿಗೆ ಒಂದು ಸ್ಥಾನ, ಪರಿಶಿಷ್ಟ ಜಾತಿಗೆ ಒಂದು ಸಚಿವ ಸ್ಥಾನ ಹಾಗೂ ಮತ್ತೊಂದು ಸ್ಥಾನ ಯಾರಿಗೆ ಕೊಡುತ್ತಾರೆ ನೋಡಬೇಕು ಎಂದರು.
BIG NEWS: ಮತ್ತೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ
ಒಟ್ಟಾರೆ ಬಹುನಿರೀಕ್ಷಿತ ಕೇಂದ್ರ ಸಂಪುಟ ಪುನಾರಚನೆ ಇಂದೇ ನಡೆಯಲಿದ್ದು, ರಾಜ್ಯದ ಸಂಸದರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.