ನವದೆಹಲಿ: ನಿನ್ನೆಯಷ್ಟೇ ಕೇಂದ್ರ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಮಾಡಿ ಖಾತೆ ಹಂಚಿಕೆ ಮಾಡಲಾಗಿದ್ದು, ಇಂದು ಸಂಪುಟ ಸಭೆ ನಡೆಸಿ ಮೂರು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು, ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವರು ಜಂಟಿ ಸುದ್ದಿಗೋಷ್ಠಿಯಲ್ಲಿ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ಎಪಿಎಂಸಿಗಳ ಬಲವರ್ಧನೆಗೆ. ತೀರ್ಮಾನಿಸಲಾಗಿದೆ. ತೆಂಗು ಮಂಡಳಿ ಕಾಯ್ದೆಗೆ ತಿದ್ದುಪಡಿ ಮಾಡಲು ನಿರ್ಧರಿಸಲಾಗಿದ್ದು, ರೈತರಿಗೆ ಎಪಿಎಂಸಿ ಮೂಲಕ ಒಂದು ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನೀಡಲು ತೀರ್ಮಾನಿಸಲಾಗಿದೆ. ರಾಜ್ಯಗಳಿಗೆ ತುರ್ತು ಕೋವಿಡ್ ಫಂಡ್ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯಗಳಿಗೆ 15 ಸಾವಿರ ಕೋಟಿ ರೂಪಾಯಿ ತುರ್ತು ಕೋವಿಡ್ ಫಂಡ್ ನೀಡಲಾಗುವುದು ಎಂದು ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.