ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆ ಮೇರೆಗೆ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಅರವಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು.