ಬೆಂಗಳೂರು: ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.
ಇದಕ್ಕಾಗಿ ಷರತ್ತು ವಿಧಿಸಲಾಗಿದೆ. ಸರ್ಕಾರದಿಂದ ಅಧಿಕೃತ ಪರವಾನಿಗೆ ಹೊಂದಿದ ಖಾಸಗಿ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳು ಮತ್ತು ಚಿಟ್ ಫಂಡ್ ಗಳಿಂದ ಪಡೆದುಕೊಂಡ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಅಂತಹ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತದೆ. ಸರ್ಕಾರದ ಪರವಾನಿಗೆ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದುಕೊಂಡಿದ್ದರೆ ಪರಿಹಾರ ನೀಡುವುದಿಲ್ಲ ಎನ್ನಲಾಗಿದೆ.
ಪರವಾನಿಗೆ ಇಲ್ಲದ ಖಾಸಗಿ ಲೇವಾದೇವಿಗಾರರಿಂದ ಪಡೆದುಕೊಂಡ ಸಾಲ ಪ್ರಕರಣಗಳಲ್ಲಿ ಪರಿಹಾರ ನೀಡುವುದಿಲ್ಲ. ಯಾದಗಿರಿ ಜಿಲ್ಲೆಯ ರೈತರೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ವಿಚಾರಣೆ ನಡೆದಿದ್ದ ವೇಳೆ ಖಾಸಗಿ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಲಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರದಿಂದ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ಸರ್ಕಾರದಿಂದ ಅಧಿಕೃತವಾಗಿ ಪರವಾನಿಗೆ ಹೊಂದಿದ ಹಣಕಾಸು ಸಂಸ್ಥೆಗಳು, ಲೇವಾದೇವಿಗಾರರಿಂದ ಸಾಲ ಪಡೆದಿರುವುದನ್ನು ಪರಿಗಣಿಸಲಾಗಿದೆ ಎನ್ನಲಾಗಿದೆ.