ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಗುರುವಾರದಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಟ ದುನಿಯಾ ವಿಜಯ್ ಅವರು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ತಮ್ಮ ತಾಯಿಯೊಂದಿಗಿರುವ ಫೋಟೋವನ್ನು ಹಂಚಿಕೊಂಡು ‘ಅಮ್ಮ ಮತ್ತೆ ಹುಟ್ಟಿ ಬಾ’ ಎಂದು ಉಲ್ಲೇಖಿಸಿದ್ದಾರೆ.
ಫೇಸ್ಬುಕ್ ನಲ್ಲಿ ಪೊಲೀಸರ ಮಾನಹಾನಿ ಸಂದೇಶ ಪೋಸ್ಟ್ ಮಾಡಿದ್ದ ಆರೋಪಿ ಅರೆಸ್ಟ್
ನಾರಾಯಣಮ್ಮ ಅವರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ ಅವರ ಊರು ಆನೇಕಲ್ ಬಳಿಯ ಕುಂಬಾರ ಹಳ್ಳಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.