ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನತೆಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಲಸಿಕೆ ಲಭ್ಯವಿದೆ.
ಕೊರೋನಾ ನಿಯಂತ್ರಣದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಯಶಸ್ವಿಯಾಗಿ 2.5 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಇದುವರೆಗೆ 2,06,01,462 ಮೊದಲನೇ ಡೋಸ್, 45,20,1506 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 7609 ಸರ್ಕಾರಿ ಮತ್ತು 598 ಖಾಸಗಿ ಸೇರಿದಂತೆ 8207 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.