ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಬಾಲಕರ ಪ್ರೌಢಶಾಲೆ ಉಪಗ್ರಹ ಉಡ್ಡಯನದ ಕಾರ್ಯಕ್ರಮದ ಭಾಗವಾಗಲಿರುವ ದೇಶದ ಪ್ರಪ್ರಥಮ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮುಂದಿನ ವರ್ಷ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರ ಶಾಲೆಯ ವಿದ್ಯಾರ್ಥಿಗಳು 75 ಉಪಗ್ರಹಗಳ ಉಡಾವಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇಂತಹ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗಿಯಾಗುತ್ತಾರೆ. ಆದರೆ ಈ ಬಾರಿ ಇಸ್ರೋದ ಸಹಾಯದಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉಪಗ್ರಹ ಉಡಾವಣೆಗೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಿದ್ದಾರೆ.