ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, 2021 ರ ಸಿಇಟಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16 ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಜುಲೈ 19 ರ ವರೆಗೆ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ವಿಶೇಷ ವರ್ಗದ ಪ್ರಮಾಣ ಪತ್ರ ಸಲ್ಲಿಕೆಗೆ ಜುಲೈ 14 ರಿಂದ 20 ರವರೆಗೆ ಅವಕಾಶ ನೀಡಲಾಗಿದೆ. ವಿವರಗಳಿಗಾಗಿ http://kea.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.