ಕೊರೊನಾ ಸಂಕಷ್ಟದಿಂದಾಗಿ ಈಗಾಗಲೇ ಸಾವಿರಾರು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನು ಉದ್ಯೋಗದಲ್ಲಿರುವವರು ತಮ್ಮ ಕೆಲಸ ಉಳಿದರೆ ಸಾಕು ಎಂಬ ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಇದರ ಮಧ್ಯೆ ಐಟಿ ದಿಗ್ಗಜ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಶುಭಸುದ್ದಿಯೊಂದನ್ನು ನೀಡಿದೆ.
ಈ ವರ್ಷ ಕ್ಯಾಂಪಸ್ ಸಂದರ್ಶನಗಳ ಮೂಲಕ 40000 ಪದವೀಧರರನ್ನು ನೇಮಕ ಮಾಡಿಕೊಳ್ಳುವುದಾಗಿ ಟಿಸಿಎಸ್ ತಿಳಿಸಿದ್ದು, ಅಮೆರಿಕಾ ಹಾಗೂ ಲ್ಯಾಟಿನ್ ಅಮೆರಿಕದಲ್ಲೂ ಸಹ ಎರಡು ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ.
ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಈಗಾಗಲೇ ಐದು ಲಕ್ಷ ಮಂದಿ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಈಗ ಮತ್ತೆ 40 ಸಾವಿರ ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಖಾಸಗಿ ವಲಯದಲ್ಲಿ ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತಿರುವ ಕಂಪನಿ ಎಂಬ ಹೆಗ್ಗಳಿಕೆ ಟಿಸಿಎಸ್ ಗೆ ಇದೆ.