ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,766 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದೆ.
ಕೋವಿಡ್ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1,206 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 4,07,145 ತಲುಪಿದೆ.
ದೇಶದಲ್ಲಿನ ಒಟ್ಟು ಕೋವಿಡ್ ಸಂಕ್ರಿಯ ಪ್ರಕರಣ 4,55,033
ಈವರೆಗೆ ಗುಣಮುಖರಾದವರ ಸಂಖ್ಯೆ 2,99,33,538
ಕಳೆದ 24 ಗಂಟೆಯಲ್ಲಿ ಡಿಸ್ಚಾರ್ಜ್ ಆದವರ ಸಂಖ್ಯೆ 45,254
ಕಳೆದ 24 ಗಂಟೆಯಲ್ಲಿ 19,55,225 ಮಂದಿಯ ಸ್ಯಾಂಪಲ್ ಟೆಸ್ಟ್ ಮಾಡಲಾಗಿತ್ತು.
ಕಳೆದ 24 ಗಂಟೆಯಲ್ಲಿ 30,55,802 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 37.21 ಕೋಟಿ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.