ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯವಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಯೂಟರ್ನ್ ತೆಗೆದುಕೊಂಡಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಅವರು, ರಾಜೀನಾಮೆ ಈಗ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಸ್ವಾಮೀಜಿಗಳು, ಹಿತೈಷಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ್ದು, ಹಿರಿಯರ ಸಲಹೆಯನ್ವಯ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ.