ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಈ ಮಾಹಿತಿ ನೀಡಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯ ಧನವನ್ನು 20 ಸಾವಿರಕ್ಕೆ ಏರಿಕೆ ಮಾಡಲಾಗಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
BIG NEWS: ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜ್; ಈ ವರ್ಷದಿಂದಲೇ ಆರಂಭ
ಬಯಲು ಶೌಚ ಮುಕ್ತವನ್ನಾಗಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.