ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಬಡ ಮತ್ತು ಮಧ್ಯಮ ವರ್ಗದ ಬದುಕು ಮೂರಾಬಟ್ಟೆಯಾಗಿದೆ. ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಸಹ ಮುಗಿಲು ಮುಟ್ಟಿದ್ದು, ಇದರಿಂದಾಗಿ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿ ಪರಿಣಮಿಸಿದೆ.
ಅದರಲ್ಲೂ ಲಾಕ್ ಡೌನ್ ಸಂದರ್ಭದಲ್ಲಿ ಬಡ ಜನತೆ ಕೆಲಸ ಇಲ್ಲದ ಕಾರಣ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಪೈಕಿ ಕಟ್ಟಡ ಕಾರ್ಮಿಕರ ಕ್ಷೇತ್ರವು ಸಹ ಸೇರಿತ್ತು. ಇದೀಗ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
BREAKING: ‘ಕೋಪಾ’ ಫುಟ್ಬಾಲ್ ಟೂರ್ನಿ ಫೈನಲ್ ನಲ್ಲಿ ಬ್ರೆಜಿಲ್ ಬಗ್ಗುಬಡಿದ ಅರ್ಜೆಂಟೈನಾ, 28 ವರ್ಷಗಳ ಬಳಿಕ ಚಾಂಪಿಯನ್
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಎಸ್ಆರ್ಟಿಸಿ ಅಧ್ಯಕ್ಷ ಎಂ. ಚಂದ್ರಪ್ಪ, ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಇನ್ನು ಎರಡು ಮೂರು ತಿಂಗಳಲ್ಲಿ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಅವರುಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಿದ್ದಾರೆ.