ಬೆಂಗಳೂರು: ಪ್ರಾಣಿಗಳ ರಕ್ಷಣೆಗೆ ಸಾರ್ವಜನಿಕರಿಂದ 1.3 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರೆ ನೀಡಿದ ಹಿನ್ನೆಲೆಯಲ್ಲಿ ಇಷ್ಟೊಂದು ದೇಣಿಗೆ ಸಂಗ್ರಹವಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನ ಇಡಿ ವನಶ್ರೀ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ನೈಸರ್ಗಿಕ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಹಲವರು ಸಹಾಯ ಮಾಡಿದ್ದಾರೆ. ಅನೇಕರು ಪ್ರಾಣಿಗಳನ್ನು ದತ್ತು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ.
2020 ರಲ್ಲಿ ಪ್ರಾಣಿಗಳ ಪಾಲನೆಗಾಗಿ 60 ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಲಾಗಿತ್ತು ದರ್ಶನ್ ಅವರು ಕರೆ ಕೊಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಜನ ದೇಣಿಗೆ ನೀಡಿದ್ದಾರೆ. ದೇಣಿಗೆ ನೀಡಿದವರ ಹೆಸರು ಪಟ್ಟಿ ಮಾಡಿ ಫಲಕ ಹಾಕಲಾಗುವುದು ಎಂದು ಹೇಳಲಾಗಿದೆ.