ಬ್ಯಾಂಕುಗಳಲ್ಲಿನ ಭ್ರಷ್ಟಾಚಾರ ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. 2015 ರಿಂದಲೂ ಜಾರಿಯಲ್ಲಿದ್ದ ನಿಯಮವೊಂದನ್ನು ಈಗ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ.
ಭ್ರಷ್ಟಾಚಾರ ತಡೆಗಾಗಿ ಆಯಕಟ್ಟಿನ ಹುದ್ದೆಗಳಲ್ಲಿರುವ ಅಧಿಕಾರಿಗಳಿಗೆ ಪ್ರತಿವರ್ಷ ಯಾವುದೇ ಮುನ್ಸೂಚನೆ ನೀಡದೆ ಕನಿಷ್ಠ ಹತ್ತು ದಿನಗಳ ಕಾಲ ಕಡ್ಡಾಯ ರಜೆ ನೀಡಬೇಕೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳಿಗೆ ಸೂಚಿಸಿದೆ.
ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಬಿಡುಗಡೆಗೆ ಕೇಂದ್ರ ನಿರ್ಧಾರ
ಈ ನಿಯಮ ತಕ್ಷಣದಿಂದಲೇ ಜಾರಿಯಾಗಲಿದ್ದು, ಈ ರೀತಿಯ ಕ್ರಮದಿಂದ ಬ್ಯಾಂಕುಗಳಲ್ಲಿನ ಭ್ರಷ್ಟಾಚಾರ ಪತ್ತೆ ಹಚ್ಚಲು ಹಾಗೂ ತಡೆಗಟ್ಟಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಡಲಾಗಿದೆ. ಅಲ್ಲದೆ ಲೆಕ್ಕಪತ್ರಗಳು ಹಾಗೂ ದಾಖಲಾತಿಗಳ ಪರಿಶೀಲನೆ ಸುಗಮವಾಗಿ ನಡೆಯಲಿದೆ ಎಂದು ಹೇಳಲಾಗಿದೆ.