ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಅಧಿಕಾರಿಯ ಕೆನ್ನೆಗೆ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಕಪಾಳಮೋಕ್ಷಕ್ಕೊಳಗಾದ ಅಧಿಕಾರಿಯೇ ಸ್ವತಃ ಇದನ್ನು ಖಚಿತಪಡಿಸಿದ್ದಾರೆ.
ಉತ್ತರಪ್ರದೇಶದ ಬ್ಲಾಕ್ ಪಂಚಾಯಿತಿ ಪ್ರಮುಖರ ಆಯ್ಕೆಗಾಗಿ ನಡೆದ ಚುನಾವಣೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘರ್ಷಣೆ ಸಂಭವಿಸಿದ ವೇಳೆ ತಡೆಯಲು ಮುಂದಾದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಲಾಗಿದೆ.
ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
ಹೊಡೆತ ತಿಂದ ಅಧಿಕಾರಿ ಇಟವಾ ಎಸಿಪಿ ಅವರಿಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದು, ಬಾಂಬುಗಳನ್ನು ಬಿಜೆಪಿ ಕಾರ್ಯಕರ್ತರು ತಂದಿದ್ದರು. ನಾನು ಪ್ರಶ್ನಿಸಿದ್ದಕ್ಕೆ ಕೆನ್ನೆಗೆ ಹೊಡೆಯಲಾಗಿದೆ ಎಂದು ಹೇಳಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.