ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಬೆಲೆ ಏರಿಕೆಯಿಂದಾಗಿ ಕಂಗಾಲಾದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಣುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕಡಿಮೆಯಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಏರಿಕೆ ಕಂಡು ದೇಶಾದ್ಯಂತ ಐತಿಹಾಸಿಕ ದರಗಳನ್ನು ದಾಖಲಿಸಿದೆ. ಜನಸಾಮಾನ್ಯರಿಗೆ ಇಂಧನ ದರ ಏರಿಕೆ ನುಂಗಲಾರದ ತುತ್ತಾಗಿದೆ. ಜಾಗತಿಕ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ತಿಂಗಳ ಅಂತ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎನ್ನಲಾಗಿದೆ.