alex Certify BREAKING NEWS: ಒಂದೇ ದಿನ 38,792 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಒಂದೇ ದಿನ 38,792 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆ

ನವದೆಹಲಿ: ನಿನ್ನೆಗೆ ಹೋಲಿಸಿದರೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 38,792 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 624 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,11,408ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,29,946 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 24 ಗಂಟೆಯಲ್ಲಿ 41,000 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30104720 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 19,15,501 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 43,59,73,639 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಕಳೆದ 24ಗಂಟೆಯಲ್ಲಿ 37,14,441 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 38,76,97,935 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೇರಳದಲ್ಲಿ ಮತ್ತೆ ಕಂಪ್ಲೀಟ್‌ ಲಾಕ್‌ ಡೌನ್:‌ ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೆ ಕೇರಳದಲ್ಲಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಪ್ರತಿನಿತ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಕೇರಳ ಸರ್ಕಾರ ವಾರಾಂತ್ಯದ ದಿನವಾದ ಜುಲೈ 17 ಹಾಗೂ 18 ರಂದು ಕಂಪ್ಲೀಟ್‌ ಲಾಕ್‌ ಡೌನ್‌ ಘೋಷಿಸಿದೆ.

ಇಳಿಕೆಯಾಗಲಿದೆ ಹಲವು ವೈದ್ಯಕೀಯ ಉಪಕರಣಗಳ ಬೆಲೆ: ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಹಳಷ್ಟು ಸಾವು – ನೋವು ಸಂಭವಿಸಿದ್ದು, ಸಕಾಲದಲ್ಲಿ ವೈದ್ಯಕೀಯ ನೆರವು ಸಿಗದೆ ಇದ್ದುದೇ ಇದಕ್ಕೆ ಕಾರಣವೆಂದು ಹೇಳಲಾಗಿತ್ತು. ಅಲ್ಲದೇ ಆಕ್ಸಿಜನ್ ಮಟ್ಟ ಪರೀಕ್ಷಿಸುವ‌ ಆಕ್ಸಿಮೀಟರ್‌, ದೇಹದ ಉಷ್ಣತೆ ಪರೀಕ್ಷಿಸುವ ಥರ್ಮಾಮೀಟರ್‌ ಮೊದಲಾದವುಗಳ ಬೆಲೆ ಮುಗಿಲುಮುಟ್ಟಿತ್ತು. ಈಗ ಮೂರನೇ ಅಲೆ ಭೀತಿ ಎದುರಾಗಿರುವ ಮಧ್ಯೆ ಕೇಂದ್ರ ಸೆರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರ ಕೈಗೊಂಡಿರುವ ಕ್ರಮದಿಂದಾಗಿ ಆಕ್ಸಿಮೀಟರ್‌, ಥರ್ಮಾಮೀಟರ್‌, ಆಕ್ಸಿಜನ್‌ ಕಾನ್ಸ್ಟ್ರೇಟರ್‌, ರಕ್ತದಲ್ಲಿನ ಸಕ್ಕರೆ ಅಂಶ ಪರೀಕ್ಷಿಸುವ ಸಾಧನ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳ ಬೆಲೆಯಲ್ಲಿ ಭಾರಿ ಇಳಿಕೆಯಾಗಲಿದೆ.

ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 76 ಹೊಸ ಕೇಸ್ ಪತ್ತೆ:‌ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನ 76 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ಇಬ್ಬರು ಸಾವನ್ನಪ್ಪಿದ್ದು, ಪಾಸಿಟಿವಿಟಿ ದರ 0.11 ಕ್ಕೆ ತಲುಪಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...