ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4.30 ಕ್ಕೆ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಪರಿಷತ್, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ ನಡೆಸಲಿದ್ದು, ಸಭೆಯಲ್ಲಿ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಕಾಲೇಜ್ ಗಳಲ್ಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಕಾಲೇಜ್ ಗಳನ್ನು ಆರಂಭಿಸಲು ಚಿಂತನೆ ನಡೆದಿದ್ದು, ವ್ಯಾಕ್ಸಿನೇಷನ್ ಈಗಾಗಲೇ ಪೂರ್ಣಗೊಂಡ ಹಿನ್ನಲೆಯಲ್ಲಿ ಕಾಲೇಜ್ ಗಳನ್ನು ಆರಂಭಿಸಲು ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.