ನವದೆಹಲಿ: ಕೋವಿಡ್ ನಿಯಂತ್ರಣ, ಮೂರನೇ ಅಲೆ ತಡೆಗೆ ಸಿದ್ಧತೆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದು, ಅನ್ ಲಾಕ್ ಬಳಿಕ ಕೋವಿಡ್ ನಿಯಮಗಳನ್ನು ಪಾಲಿಸದೇ ಬೇಜವಾಬ್ದಾರಿ ತೋರುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಓಡಿಶಾ ಸಿಎಂಗಳ ಜೊತೆ ಸಭೆ ನಡೆಸಿರುವ ಪ್ರಧಾನಿ ಮೋದಿ, ಕೊರೊನಾ ಸೋಂಕು ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಲವೆಡೆಗಳಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳ ಬಗ್ಗೆ ಎಚ್ಚರ ವಹಿಸಬೇಕು. ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಒಂದೇ ಕುಟುಂಬದ ಈ ಐವರು ಅಕ್ಕ- ತಂಗಿಯರು ಮಾಡಿದ ಸಾಧನೆಗೆ ʼಹ್ಯಾಟ್ಸಾಫ್ʼ
ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯವಿರುವುದರಿಂದ ಮಕ್ಕಳನ್ನು ಕೋವಿಡ್ ನಿಂದ ರಕ್ಷಿಸಲು ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಈಗಲೇ ಪರಿಸ್ಥಿತಿ ನಿಭಾಯಿಸದಿದ್ದರೆ ಮುಂದೆ ಕಷ್ಟವಾಗಲಿದೆ. ಕೋವಿಡ್ ನಿಯಂತ್ರಣಕ್ಕೆ ಟೆಸ್ಟಿಂಗ್-ಟ್ರೇಸಿಂಗ್-ಟ್ರೀಟ್ ಮೆಂಟ್-ಟೀಕಾ ಅಂದರೆ ಕೋವಿಡ್ ಪರೀಕ್ಷೆ, ಪತ್ತೆ ಹಚ್ಚುವುದು, ಚಿಕಿತ್ಸೆ ಹಾಗೂ ಲಸಿಕೆ ಎಂಬ 4 T ಸೂತ್ರವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಿದ್ದಾರೆ.
ಅಮೆರಿಕಾ, ಯೂರೋಪ್, ಪಾಶ್ಚಾತ್ಯ ದೇಶಗಳಲ್ಲಿ ಕೊರೊನಾ ಪ್ರಕರಣ ವೇಗವಾಗಿ ಹರಡುತ್ತಿದೆ. ಅನ್ ಲಾಕ್ ಬಳಿಕ ನಮ್ಮಲ್ಲಿಯೂ ಬೇಜವಾಬ್ದಾರಿ ಹೆಚ್ಚುತ್ತಿದ್ದು, ಆತಂಕ ಮೂಡುತ್ತಿದೆ. ಮಾಸ್ಕ್, ದೈಹಿಕ, ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿ ಪಾಲನೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.