ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗಾದ ಸಿಬ್ಬಂದಿ ಎನ್ನಲಾದ ವ್ಯಕ್ತಿ ತಾನು ದಲಿತ ಸಮುದಾಯಕ್ಕೆ ಸೇರಿದವನಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಗೆ ಭೇಟಿ ನೀಡಿ ಗಲಾಟೆ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ದರ್ಶನ್ ರಿಂದ ಹಲ್ಲೆಗೊಳಗಾದ ಸಿಬ್ಬಂದಿ ಗಂಗಾಧರ್ ವಿಚಾರಣೆ ನಡೆಸಿರುವ ಪೊಲೀಸರು ಅಂದು ನಡೆದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಬಿಡುಗಡೆಯಾದ ಮೊದಲ ದಿನವೇ ʼತೂಫಾನ್ʼಗೆ ಪೈರಸಿ ಕಾಟ…..!
ಈ ವೇಳೆ ತಾನು ದಲಿತ ಸಮುದಾಯದವನಲ್ಲ, ಬ್ರಾಹ್ಮಣ ಸಮುದಾಯಕ್ಕೆ ಸೇರಿದವನು ಎಂದು ಗಂಗಾಧರ್ ಪೊಲೀಸರಿಗೆ ವಿವರಿಸಿದ್ದಾರೆ. ಅಲ್ಲದೇ ದರ್ಶನ್ ಹಲ್ಲೆ ಪ್ರಕರಣ ಸಂಬಂಧ ಹೋಟೆಲ್ ನ ಹಲವು ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ನಟ ದರ್ಶನ್ ಸಂದೇಶ್ ಪ್ರಿನ್ಸ್ ಹೋಟೆಲ್ ನ ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದರು ಎಂದು ನಿರ್ದೇಶಕ ಇಂದ್ರಜಿತ್ ಆರೋಪಿಸಿದ್ದರು.