alex Certify ಮಕ್ಕಳಿಗೆ ಲಸಿಕೆ ಯಾವಾಗ ಬರುತ್ತೆ…? ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ನೀಡಿದೆ ಈ ಉತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಲಸಿಕೆ ಯಾವಾಗ ಬರುತ್ತೆ…? ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ನೀಡಿದೆ ಈ ಉತ್ತರ

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟ ಜನರಿಗೆ ದೇಶದಲ್ಲಿ ಈಗಾಗಲೇ ಕೊರೊನಾ ಲಸಿಕೆ ಹಾಕಲಾಗ್ತಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಲಸಿಕೆ ಯಾವಾಗ ಬರುತ್ತೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ. ಕೊರೊನಾ ಮೂರನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಭಯ ಪಾಲಕರಲ್ಲಿದೆ.

ಈ ಮಧ್ಯೆ ಶುಕ್ರವಾರ ಕೊರೊನಾ ಲಸಿಕೆ ಬಗ್ಗೆ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. 18 ವರ್ಷ ಕೆಳಗಿನವರಿಗೆ ಲಸಿಕೆ ಕ್ಲಿನಿಕಲ್ ಪ್ರಯೋಗ ನಡೆಯುತ್ತಿದೆ. ಆದಷ್ಟು ಬೇಗ ಪ್ರಯೋಗ ಪೂರ್ಣಗೊಳ್ಳಲಿದ್ದು, ತಜ್ಞರ ಅನುಮತಿಯೊಂದಿಗೆ ಶೀಘ್ರದಲ್ಲೇ ಲಸಿಕೆ ಅಭಿಯಾನ ಶುರು ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಇದಕ್ಕೆ ಉತ್ತರಿಸಿದ ಹೈಕೋರ್ಟ್, ಮೊದಲು ಪರೀಕ್ಷೆ ಪೂರ್ಣಗೊಳ್ಳಲಿ. ಪರೀಕ್ಷೆ ಪೂರ್ಣಗೊಳ್ಳದೆ ಲಸಿಕೆ ಹಾಕುವುದು ಅಪಾಯಕ್ಕೆ ಕಾರಣವಾಗಬಹುದು. ಪ್ರಯೋಗ ಪೂರ್ಣಗೊಂಡ ನಂತ್ರ ಲಸಿಕೆ ಹಾಕಿ. ಲಸಿಕೆಗಾಗಿ ಇಡೀ ದೇಶ ಕಾಯ್ತಿದೆ ಎಂದಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 6ರಂದು ನಡೆಯಲಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...