ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಸಬ್ಸಿಡಿ ಮುಂದುವರೆಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಕೃಷಿ ಅಧಿಕಾರಿಗಳೊಂದಿಗೆ, ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಈ ಹಿಂದೆ ನೀಡುತ್ತಿದ್ದ ಸಬ್ಸಿಡಿಯನ್ನು ಅದೇ ಮಾದರಿಯಲ್ಲಿ ಮುಂದುವರೆಸಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ಎಲ್ಲಾ ವರ್ಗದ ಎರಡು ಹೆಕ್ಟೇರ್ ಜಮೀನು ಹೊಂದಿದ ರೈತರಿಗೆ ಶೇಕಡ 90 ರಷ್ಟು, 5 ಹೆಕ್ಟೇರ್ ಜಮೀನು ಹೊಂದಿದ ರೈತರಿಗೆ ಶೇಕಡ 45 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆದೇಶದ ಅನ್ವಯ ಹಿಂದಿನ ಮಾದರಿಯಲ್ಲಿಯೇ ಸಬ್ಸಿಡಿ ಮುಂದುವರೆಸಲಾಗುವುದು. 5 ಹೆಕ್ಟೇರ್ ಮೇಲ್ಪಟ್ಟ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.