alex Certify BIG BREAKING: ಸಿಎಂ ದೆಹಲಿ ಪ್ರವಾಸಕ್ಕೆ ಹೆಚ್.ಡಿ.ಕೆ. ಹೊಸ ಬಾಂಬ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ ದೆಹಲಿ ಪ್ರವಾಸಕ್ಕೆ ಹೆಚ್.ಡಿ.ಕೆ. ಹೊಸ ಬಾಂಬ್…!

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ದೆಹಲಿಗೆ 6 ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳ ಜೊತೆ ದೆಹಲಿಗೆ ತೆರಳಿದ್ದಾರೆ. ನಿನ್ನೆ ಫ್ಲೈಟ್ ನಲ್ಲಿ 6 ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಬಂದಿದೆ. ಹೈಕಮಾಂಡ್ ಗೆ ಕೊಡಲು ಉಡುಗೊರೆ ತೆಗೆದುಕೊಂಡು ಹೋಗಿದ್ದಾರಾ..? ಅಥವಾ ಬೇರೆ ಏನು ತೆಗೆದುಕೊಂಡು ಹೋಗಿದ್ದಾರೆ…? ಎಂದು ಪ್ರಶ್ನಿಸಿದ್ದಾರೆ.

ನಿನ್ನೆ ಸಂಜೆ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಮೋದಿಯವರನ್ನು ಅವರೊಬ್ಬರೇ ಭೇಟಿ ಮಾಡಿದರೋ ಅಥವಾ 6 ಬ್ಯಾಗ್ ಗಳೊಂದಿಗೆ ಭೇಟಿ ಮಾಡಿದರೋ? ಎಂಬುದನ್ನು ಮುಖ್ಯಮಂತ್ರಿಗಳೇ ಹೇಳಬೇಕು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...