ಕೊರೊನಾ ಹಿನ್ನಲೆಯಲ್ಲಿ ಐಪಿಎಲ್ 2021ರ ಪಂದ್ಯಗಳನ್ನು ಮುಂದೂಡಲಾಗಿತ್ತು. ಉಳಿದ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ. ಐಪಿಎಲ್‌ನ ಉಳಿದ ಪಂದ್ಯಗಳು ಸೆಪ್ಟೆಂಬರ್ 17 ರಿಂದ ನಡೆಯಲಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಧೋನಿ ಇತ್ತೀಚಿಗೆ ತಮ್ಮ ಲುಕ್ ಬದಲಿಸಿಕೊಂಡಿದ್ದಾರೆ. ಮೀಸೆ ಬಿಟ್ಟಿದ್ದ ಧೋನಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಧೋನಿ ಹೊಸ ಲುಕ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಐಪಿಎಲ್ ಗೂ ಮುನ್ನ ಧೋನಿ ಸ್ಲಿಮ್ ಆಗಿದ್ದಾರೆ. ತೂಕ ಕಳೆದುಕೊಂಡಿರುವ ಧೋನಿ ಫಿಟ್ನೆಸ್ ಯುವ ಆಟಗಾರರನ್ನು ನಾಚಿಸುವಂತಿದೆ.
ಒಂದು ದಿನದ ಹಿಂದೆ ಧೋನಿ, ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದರು. ಧೋನಿ ಜುಲೈ 7 ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಧೋನಿ 40ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಧೋನಿ, ಪತ್ನಿ ಸಾಕ್ಷಿ, ಮಗಳು ಹಾಗೂ ಆಪ್ತರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಕೊರೊನಾ ಕಾರಣಕ್ಕೆ ಮೇ. 4ರಂದು ಮುಂದೂಡಲ್ಪಟ್ಟಿದ್ದ ಐಪಿಎಲ್ 2021ರ ಉಳಿದ ಪಂದ್ಯಗಳು ಸೆಪ್ಟೆಂಬರ್‌ನಲ್ಲಿ ನಡೆಯಲಿವೆ.