ಮಾನ್ಸೂನ್ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಸಂಜೆ 6 ಗಂಟೆ ಸುಮಾರಿಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಲೋಕಸಭಾ ಸದಸ್ಯರು ಸೋನಿಯಾಗಾಂಧಿಯನ್ನ ಭೇಟಿಯಾಗಲಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಯಾವುದೆಲ್ಲ ವಿಚಾರಗಳ ಬಗ್ಗೆ ಗಮನ ಸೆಳೆಯಬೇಕು ಅನ್ನೋದ್ರ ಬಗ್ಗೆ ಸಂಸದರು ಚರ್ಚೆ ನಡೆಸುವ ಸಾಧ್ಯತೆ ಇದೆ.
ಈ ಸಭೆಯ ನೇತೃತ್ವವನ್ನ ಸೋನಿಯಾ ಗಾಂಧಿ ವಹಿಸಲಿದ್ದು ಸಂಸದರಿಗೆ ಕೆಲ ಮುಖ್ಯ ಸಲಹೆಗಳನ್ನ ನೀಡಲಿದ್ದಾರೆ ಎನ್ನಲಾಗಿದೆ.
ಈ ಬಾರಿಯ ಮಾನ್ಸೂನ್ ಅಧಿವೇಶನದಲ್ಲಿ ಮೋದಿ ಸರ್ಕಾರ ಜನಸಂಖ್ಯೆ ನಿಯಂತ್ರಣ ಹಾಗೂ ಏಕರೂಪ ನಾಗರಿಕ ಸಂಹಿತೆ ಖಾಸಗಿ ಸದಸ್ಯರ ಮಸೂದೆಯನ್ನ ಪರಿಚಯಿಸಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.