
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1869 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕಿತರ ಸಂಖ್ಯೆ 28,82,239 ಕ್ಕೆ ಏರಿಕೆಯಾಗಿದೆ.
ಇವತ್ತು 3144 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,16,013 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 30,082 ಸಕ್ರಿಯ ಪ್ರಕರಣಗಳಿದ್ದು, ಇವತ್ತು 42 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 36,121 ಜನ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.30 ರಷ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 432 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 635 ಜನ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು, 12,167 ಸಕ್ರಿಯ ಪ್ರಕರಣಗಳಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 101 ಜನರಿಗೆ ಸೋಂಕು ತಗುಲಿದ್ದು, ದಕ್ಷಿಣಕನ್ನಡ 218, ಹಾಸನ 173, ಮೈಸೂರು 207, ತುಮಕೂರು 92, ಉಡುಪಿ 94 ಜನರಿಗೆ ಸೋಂಕು ತಗುಲಿದೆ.
ಬೆಳಗಾವಿ ಜಿಲ್ಲೆಯಲ್ಲಿ 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಹಾಸನ 3, ಕೋಲಾರ 4, ಮೈಸೂರು 7, ಮಂಡ್ಯ 3 ಸೇರಿದಂತೆ ರಾಜ್ಯದಲ್ಲಿ 42 ಮಂದಿ ಮೃತಪಟ್ಟಿದ್ದಾರೆ.