ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಈಗ ಜುಲೈ 19 ರ ಸೋಮವಾರದಿಂದ ರಾಜ್ಯದ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವತಿಯಿಂದ ಈ ಕುರಿತಾಗಿ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವುದರಿಂದ ಬಯೋಮೆಟ್ರಿಕ್ ಹಾಜರಾತಿಯನ್ನು ಇಂದಿನಿಂದ ಮತ್ತೆ ಆರಂಭಿಸಲಾಗಿದೆ ಎಂದು ಹೇಳಲಾಗಿದೆ.