ನವದೆಹಲಿ: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಅನೇಕ ಯೋಜನೆ ರೂಪಿಸಿ ಜಾರಿಗೊಳಿಸಿದೆ. ರೈತರಿಗೆ ಆರ್ಥಿಕ ನೆರವು ನೀಡಲು ಹಲವು ಯೋಜನೆ ಜಾರಿಗೊಳಿಸಲಾಗಿದ್ದು, ಮತ್ತೊಂದು ಸಿಹಿ ಸುದ್ದಿ ರೈತರಿಗೆ ಸಿಕ್ಕಿದೆ. ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಸರ್ಕಾರ ಶೇಕಡ 50 ರಷ್ಟು ಸಬ್ಸಿಡಿ ನೀಡಲಿದೆ.
ಟ್ರ್ಯಾಕ್ಟರ್ ಗಳ ಖರೀದಿಗೆ ಸಹಾಯಧನ ಯೋಜನೆ ನೀಡುವ ಯೋಜನೆ ಆರಂಭಿಸಲಾಗಿದೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿ ಶೇಕಡ 50 ರಷ್ಟು ಸಬ್ಸಿಡಿ ನೀಡಲಾಗುವುದು.
ಕೃಷಿ ಚಟುವಟಿಕೆಗಳಿಗೆ ಟ್ರ್ಯಾಕ್ಟರ್ ಗಳು ಅವಶ್ಯಕವಾಗಿದ್ದರೂ ಆರ್ಥಿಕ ತೊಂದರೆ ಕಾರಣ ಅನೇಕರಿಗೆ ಟ್ರ್ಯಾಕ್ಟರ್ ಖರೀದಿಸಲು ಸಾಧ್ಯವಾಗುವುದಿಲ್ಲ. ಬಾಡಿಗೆಗೆ ಟ್ರ್ಯಾಕ್ಟರ್ ಪಡೆದು ಅಥವಾ ಎತ್ತುಗಳನ್ನು ಬಳಸಿ ಉಳುಮೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆ ಕೈಗೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಜಾರಿಗೊಳಿಸಿದ್ದು, ಅರ್ಧದಷ್ಟು ದರದಲ್ಲಿ ರೈತರಿಗೆ ಟ್ರ್ಯಾಕ್ಟರ್ ಒದಗಿಸಲಾಗುತ್ತದೆ.
ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್ ಗಳನ್ನು ಅರ್ಧ ಬೆಲೆಗೆ ಖರೀದಿಸಬಹುದು. ಉಳಿದ ಹಣವನ್ನು ಸರ್ಕಾರ ಸಬ್ಸಿಡಿ ರೂಪದಲ್ಲಿ ನೀಡುತ್ತದೆ. ಆಧಾರ್ ಕಾರ್ಡ್, ಲ್ಯಾಂಡ್ ಪೇಪರ್, ಬ್ಯಾಂಕ್ ವಿವರ ಸೇರಿದಂತೆ ಅಗತ್ಯ ದಾಖಲೆ ಹೊಂದಿದ ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ ನೆರವು ನೀಡಲಾಗುತ್ತದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ ನೀಡಲಾಗುತ್ತಿದೆ. ಈಗ ಕೇಂದ್ರವೂ ಶೇಕಡ 50 ರಷ್ಟು ಸಬ್ಸಿಡಿ ನೀಡಲಿದೆ ಎನ್ನಲಾಗಿದೆ.