ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳಂತೆ ರಾಜ್ಯದಲ್ಲಿ ಹೊಸದಾಗಿ 6 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು.
6 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಿಎಂ ಅನುಮೋದನೆಯೊಂದಿಗೆ ಯೋಜನೆಯನ್ನು ಆರಂಭಿಸಲಾಗುತ್ತದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿನ ಬಡವರಿಗಾಗಿ ಮುಖ್ಯಮಂತ್ರಿ ವಸತಿ ಯೋಜನೆಯಡಿ ಒಂದು ಲಕ್ಷ ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಆಗಸ್ಟ್ 15 ರಂದು 5 ಸಾವಿರ ಮನೆಗಳನ್ನು ಮುಖ್ಯಮಂತ್ರಿಗಳು ಹಂಚಿಕೆ ಮಾಡಲಿದ್ದಾರೆ.
ವಸತಿ ಯೋಜನೆಯಡಿ ಸಾಮಾನ್ಯ ವರ್ಗದ ಬಡವರಿಗೆ 1.20 ಲಕ್ಷ ರೂಪಾಯಿ ಮತ್ತು ಪರಿಶಿಷ್ಟ ವರ್ಗದವರಿಗೆ 1.50 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ. ಅರ್ಹರಿಗೆ ಯೋಜನೆಯನ್ನು ತಲುಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.