ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ವತಃ ಬದಲಾವಣೆಗೆ ಒಪ್ಪಿಕೊಂಡಿದ್ದಾರಾ ಎಂಬ ಹೊಸ ಚರ್ಚೆ ಆರಂಭವಾಗಿದೆ.
ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಭೇಟಿಯಾದ ಮಠಾಧೀಶರ ನಿಯೋಗದ ಬಳಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆಗೆ ಸ್ವತಃ ಸಿಎಂ ಯಡಿಯೂರಪ್ಪ ಒಪ್ಪಿಕೊಂಡ್ರಾ? ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಮನೆ ಮಾಡಿದೆ.
ಸಿಎಂ ಬದಲಾವಣೆ ವದಂತಿ ಬೆನ್ನಲ್ಲೆ ಮಠಾಧೀಶರ ನಿಯೋಗ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಈ ವೇಳೆ ನನ್ನ ಕೈಲಿ ಏನೂ ಇಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನದಂತೆ ನಾನು ನಡೆದುಕೊಳ್ಳಬೇಕಾಗುತ್ತೆ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಅವರು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾಗಿ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶ ಬಂದಿದೆಯೇ ಎಂಬ ಅನುಮಾನ ಕೂಡ ಆರಂಭವಾಗಿದೆ.
ಪಪ್ಪಾಯ ಮರ ಸರಿಯಾಗಿ ಹಣ್ಣು ಬಿಡುತ್ತಿಲ್ಲವೆಂದರೆ ಈ ಟಿಪ್ಸ್ ಫಾಲೋ ಮಾಡಿ
ರಾಜ್ಯದ ಮಠಾಧೀಶರು ಸಿಎಂ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, ಯಾವುದೇ ಕಾರಣಕ್ಕೂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸ್ವಾಮೀಜಿಗಳ ಎಚ್ಚರಿಕೆ ಬೆನ್ನಲ್ಲೇ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಕಾದು ನೋಡಬೇಕಿದೆ.