ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೊರತುಪಡಿಸಿ ಉಳಿದ ಜಾತಿಗಣತಿ ಇಲ್ಲವೆಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಸ್ಸಿ,ಎಸ್ಟಿ ಹೊರತುಪಡಿಸಿ ಇತರೆ ಜನಸಂಖ್ಯೆಯ ಜಾತಿ ಗಣತಿಯನ್ನು ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೊರತುಪಡಿಸಿ ಉಳಿದ ಜಾತಿಗಳ ಗಣತಿ ಮಾಡದಿರಲು ತೀರ್ಮಾನಿಸಲಾಗಿದೆ.
ಒಡಿಶಾ, ಮಹಾರಾಷ್ಟ್ರ ಸರ್ಕಾರಗಳು ಮುಂದಿನ ಜನಗಣತಿಯಲ್ಲಿ ಜಾತಿಯ ಕುರಿತು ವಿವರಗಳನ್ನು ಸಂಗ್ರಹಿಸಬೇಕೆಂದು ಮನವಿ ಮಾಡಿವೆ. ನೀತಿಗೆ ಅನುಗುಣವಾಗಿ ಭಾರತ ಸರ್ಕಾರ ಇತರ ಜನಸಂಖ್ಯೆಯ ಜಾತಿವಾರು ಜನಗಣತಿಯನ್ನು ಮಾಡದಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ.