ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಇದೀಗ ಸಚಿವ ಶ್ರೀರಾಮುಲು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲೇ ಸಚಿವ ಶ್ರೀರಾಮುಲು ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಈ ನಿಟ್ಟಿನಲ್ಲಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹೀಗೆ ಬಯಲಾಯ್ತು ಬುರ್ಕಾ ಧರಿಸಿ ವಿಮಾನವೇರಿದ್ದ ಕೊರೊನಾ ಪಾಸಿಟಿವ್ ವ್ಯಕ್ತಿಯ ಬಣ್ಣ..!
ಈಗಾಗಲೇ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಇದೀಗ ವರಿಷ್ಠರ ಬುಲಾವ್ ಮೇರೆಗೆ ಶ್ರೀರಾಮುಲು ಕೂಡ ದೆಹಲಿ ಪ್ರವಾಸ ಕೈಗೊಡಿರುವುದು ಅಚ್ಚರಿಗೆ ಕಾರಣವಾಗಿದೆ.