alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಗಸ್ಟ್ 2 ರಿಂದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಗಸ್ಟ್ 2 ರಿಂದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ

ಕಲಬುರಗಿ: ಕೋವಿಡ್ ನಿಂದ ಮುಂದೂಡಲ್ಪಟ್ಟಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‍ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಇದೇ ಆಗಸ್ಟ್ 2 ರಿಂದ ನಡೆಸಲಾಗುತ್ತದೆ.

ಗುಲಬರ್ಗಾ ವಿವಿಯ ಕುಲಪತಿ ಪ್ರೊ. ದಯಾನಂದ ಅಗಸರ್ ಮಾಹಿತಿ ನೀಡಿ, ಉನ್ನತ ಶಿಕ್ಷಣ ಪರಿಷತ್ ಹಾಗೂ ಯುಜಿಸಿಯ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, 4 ಜಿಲ್ಲೆಗಳ ಸುಮಾರು 150 ಪರೀಕ್ಷಾ ಕೇಂದ್ರಗಳಲ್ಲಿ  ಒಟ್ಟು 1 ಲಕ್ಷ 20 ಸಾವಿರ ಪದವಿ ಹಾಗೂ 12 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಲಿದ್ದಾರೆ ಎಂದು ಅವರು ವಿವರಿಸಿದರು.

ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಆಧರಿಸಿ 2 ಹಾಗೂ 4ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳನ್ನು ಹಾಗೂ 2 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲಾಗುವುದರ ಮೂಲಕ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಇದಲ್ಲದೆ 6 ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಹಾಗೂ 4 ನೇ ಸೆಮಿಸ್ಟರ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.

ಜುಲೈ 28 ರಿಂದ ಬಿಎಡ್ ಪರೀಕ್ಷೆ:

ಈಗಾಗಲೇ ತರಗತಿ ಮುಗಿಸಿರುವ ಬಿಎಡ್ ವಿದ್ಯಾರ್ಥಿಗಳಿಗೆ ಇದೇ ಜುಲೈ 28 ರಿಂದ ಪರೀಕ್ಷೆಗಳನ್ನು ನಡೆಸಲಾಗುವುದು. ವಿವಿ ವ್ಯಾಪ್ತಿಯ 4 ಜಿಲ್ಲೆಗಳ 9200 ವಿದ್ಯಾರ್ಥಿಗಳು ಬಿ.ಎಡ್ ಪರೀಕ್ಷೆ ಎದುರಿಸಲು ಸಿದ್ಧವಾಗಿದ್ದು, 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...